ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆ ಯನ್ನು ಖಂಡಿಸಿ ನಾಡಿದ್ದು ಫೆಬ್ರವರಿ 7ರಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಗ್ಗೆ 11 ಗಂಟೆಗೆ ಧರಣಿ ಹಮ್ಮಿಕೊಳ್ಳಲಾಗಿದೆ.
ಈ ವಿಷಯವಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿ ಕಾರಿಂದು ಈ ರೀತಿ ಧರಣಿ ಕುಳಿತುಕೊಂಡು ರಾಜ್ಯದ ಮಾನ ಮರ್ಯಾದೆ ತೆಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರುವಂತಹ ಅನುದಾನದಲ್ಲಿ ತಾರತಮ್ಯವಾಗಿದ್ದರೆ ಕಳೆದ ಯುಪಿಎ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮನಮೋಹನ್ ಸಿಂಗ್ ಪ್ರಧಾನಿ ಮಂತ್ರಿ ಆಗಿದ್ದಾಗ ಎಷ್ಟು ಅನುದಾನ ಬಂದಿತ್ತು, ಇದೀಗ ನರೇಂದ್ರ ಮೋದಿ ನೇತೃತ್ವದಲ್ಲಿರುವ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದರ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ಈಶ್ವರಪ್ಪ ಸಿಎಂ ಸಿದ್ದರಾಮಯ್ಯಗೆ ಸವಾಲು ಎಸೆದರು.