ಬೆಂಗಳೂರು, ಫೆಬ್ರುವರಿ 29: ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧೀಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮುಯ್ಯ ಹೇಳಿದರು.
ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು.
2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ.
ಹೆಚ್ಚಳವಾಗಿದೆ.ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ.
ಅಂರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.’ಅನ್ನಭಾಗ್ಯ’ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಬಿಗ್ ಅಪ್‌ಡೇಟ್!ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾದದ್ದು.ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ, ಕಾಂಗ್ರೆಸ್ ನವರು 9 ಜನ , ಬಿಜೆಪಿ 13 ಜನ ಹಾಗೂ ಜೆಡಿಎಸ್ 3 ಜನ ಭಾಗವಹಿಸಿದ್ದಾರೆ.
ಇಷ್ಟೂ ಸದಸ್ಯರು ಬಜೆಟ್ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ.
ಅವರ ಸಲಹೆ- ಸೂಚನೆಗಳನ್ನು ಸರ್ಕಾರ ಮುಂದಿನ ವರ್ಷದಲ್ಲಿ ಆರ್ಥಿಕ ವರ್ಷದಲ್ಲಿ ಏನೇನು ಮಾಡಬೇಕು ಅದೆಲ್ಲವನ್ನೂ ಮಾಡುತ್ತೇವೆಂದು ಹೇಳಬಯಸುತ್ತೇನೆ.2024-25ನೇ ಆಯವ್ಯಯದಲ್ಲಿ ಒಟ್ಟು ಬಜೆಟ್ ಗಾತ್ರ 3,71,343 ಕೋಟಿ ರೂ. ಗಳಾಗಿದ್ದು, ಇದರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ, ಬಂಡವಾಳ ವೆಚ್ಚ ಕೋಟಿ ರೂ. ಗಳಾಗಿದ್ದು, ನಾವು ಅಭಿವೃದ್ಧಿಗೂ ಆದ್ಯತೆ ನೀಡಿರುವುದಕ್ಕೆ ಇದು ಸಾಕ್ಷಿ. ವಿರೋಧ ಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ.