ಬೆಂಗಳೂರು: ಸೆಪ್ಟೆಂಬರ್.5ರ ಶಿಕ್ಷಕರ ದಿನಾಚರಣಯಂದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 05-09-2024ರ ನಾಳೆ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿತ್ತು ಎಂದಿದ್ದಾರೆ.
ಸೆ.5ರ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. 4 ಗಂಟೆಯ ಬದಲಾಗಿ 3 ಗಂಟೆಗೆ ನಿಗದಿ ಪಡಿಸಿರುವುದಾಗಿ ಹೇಳಿದ್ದಾರೆ.
ನಾಳೆ ಸಂಜೆ.3 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು, ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ. ಆ ಬಗ್ಗೆ ನಾಳೆಯವರೆಗೆ ಕಾದು ನೋಡಬೇಕಿದೆ.