ಇಂದು ರಾಜ್ಯ ಸರ್ಕಾರದ ಮಹತ್ವದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಇಂದು ರಾಜ್ಯ ಸರ್ಕಾರದ ಮಹತ್ವದ ಆಶಾಕಿರಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ. ಇದರಿಂದ ಸುಮಾರು 2.45 ಲಕ್ಷ ಜನರು ಉಚಿತ ಕನ್ನಡಕವನ್ನು ಪಡೆಯಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರವ್ ತಿಳಿಸಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲಾ ವಯೋಮಾನದವರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಿ ದೃಷ್ಟಿ ದೋಷ ನಿವಾರಣೆ ಉದ್ದೇಶವನ್ನು ಹೊಂದಿರುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಆಶಾಕಿರಣ- ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಎಂಬ ಯೋಜನೆಯ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಎನ್ನುವ ಧ್ಯೇಯ ವಾಕ್ಯದಡಿ ಯೋಜನೆಯೂ ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸನೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ, ಹಾವೇರಿ ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗುತ್ತದೆ.

Latest Indian news

Popular Stories