ತುಮಕೂರು: ಸರ್ಕಾರಿ ಶಾಲೆಯ ‘ಬಿಸಿಯೂಟ’ದಲ್ಲಿ ಹುಳು ಪತ್ತೆ

ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಅಡುಗೆಯಲ್ಲಿ ಹುಳು ಪತ್ತೆಯಾಗಿರುವ ಘಟನೆ, ಮಾಸುವ ಮುನ್ನವೇ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಾಜೂರಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಆಹಾರ ಪದಾರ್ಥಗಳಲ್ಲಿ ಹುಳು ಪತ್ತೆಯಾಗಿದ್ದು ಇದರಿಂದ ವಿದ್ಯಾರ್ಥಿಗಳು ತೀವೃ ಆತಂಕಕ್ಕೀಡಾದ ಘಟನೆ ನಡೆದಿದೆ.

ತಾಲೂಕು ಕಸಬಾ ಹೋಬಳಿ ವ್ಯಾಪ್ತಿಯ ಜಾಜೂರಾಯನಹಳ್ಳಿ ಗಡಿ ಪ್ರದೇಶದಲ್ಲಿದ್ದು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ಬಿಸಿಯೂಟದ ಅಡುಗೆಯ ಹಳೆ ಗೋಧಿ, ಬೇಳೆ ಇತರೆ ಆಹಾರ ಪದಾರ್ಥಗಳಲ್ಲಿ ಪದೇ ಪದೇ ಹುಳುಗಳು ಪತ್ತೆಯಾಗುತ್ತಿದ್ದು, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಫೋಷಕರು ಆನೇಕ ಭಾರಿ ಇಲ್ಲಿನ ಶಿಕ್ಷಕರ ಗಮನಕ್ಕೆ ತಂದಿದ್ದಾರೆ.

ಇನ್ನೂ ಘಟನೆಯ ವಿಷಯ ಹೊರಬೀಳುತ್ತಿದ್ದಂತೆ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರಪ್ಪ ಶಾಲೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು ಪರಿಶೀಲನೆ ನಡೆಸಿದ್ದು, ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಅಡುಗೆ ಮಾಡಬೇಕು. ಇದೇ ರೀತಿ ಮುಂದುವರಿದರೆ ಕಟ್ಟುನಿಟ್ಟಿನ ಕ್ರಮ ಜರಿಗಿಸುವುದಾಗಿ ಅಡಿಗೆ ಸಿಬ್ಬಂದಿಗೆ ಎಚ್ಚರಿಸಿದ್ದಾರೆ.

Latest Indian news

Popular Stories