ಕರ್ನಾಟಕಕ್ಕೆ ಒಂದೇ ಒಂದು ರೂಪಾಯಿಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರ ತನ್ನ ಪಾಲಿನ ವಿಶೇಷ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ಕರ್ನಾಟಕ ಸರ್ಕಾರದ ಆರೋಪವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ. ಹಣಕಾಸು ಆಯೋಗದಿಂದ ಯಾವುದೇ ಶಿಫಾರಸು ಇಲ್ಲ ಅಂಥ ಅವರು ಹೇಳಿದರು.

ಕರ್ನಾಟಕಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳುತ್ತಿದೆ ಮತ್ತು ಇದು ಸಂಪೂರ್ಣವಾಗಿ ಸುಳ್ಳು. ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ” ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ತೀವ್ರ ಬರದಿಂದ ತತ್ತರಿಸಿರುವ ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್‌ಎಫ್) ಅಡಿಯಲ್ಲಿ ತಕ್ಷಣವೇ ಅನುದಾನವನ್ನು ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕವು ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಒಂದು ದಿನದ ನಂತರ ಸೀತಾರಾಮನ್ ಅವರ ಹೇಳಿಕೆ ಬಂದಿದೆ.

Latest Indian news

Popular Stories