ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಇದೇ ವೇಳೆ ಅವರು ಮಾತನಾಡಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ.ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದರು.

ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ.

ಬರಗಾಲ ಬಂದಾಗ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ. ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬಿಜೆಪಿ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು, ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಕರ್ನಾಟಕಕ್ಕೆ ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಅಂತ ಹೇಳಿದರು.

Latest Indian news

Popular Stories