ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ವಿಧಿವಶ

ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಎಂ.ಕೆ.ಭಾಸ್ಕರರಾವ್ ಅವರು ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು. ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

ಸಮಾಜಮುಖಿ ಪತ್ರಕರ್ತರಾಗಿದ್ದ ಭಾಸ್ಕರರಾವ್ ತಮ್ಮ ಹರಿತ ಬರವಣಿಗೆ ಮಾತ್ರವಲ್ಲದೇ ಮಾತಿನಿಂದಲೂ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆ ಹಲವಾರು ಚಾನೆಲ್‍ಗಳಲ್ಲಿ ವಿಶ್ಲೇಷಣೆ ಮಾಡುತಿದ್ದರು. ಪ್ರಚಲಿತ ವಿದ್ಯಮಾನಗಳ ಕುರಿತು ನಿಖರವಾಗಿ ಮಾತನಾಡುವ ಜ್ಞಾನ ಅವರಲ್ಲಿತ್ತು ಎಂದು ತಿಳಿಸಿದ್ದಾರೆ.

ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಅಂದಹಾಗೇ, ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ್ ರಾವ್ ಅವರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಸಂಯುಕ್ತ ಕರ್ನಾಟಕ ಮತ್ತು ಪ್ರಜಾವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಎಂ ಕೆ ಭಾಸ್ಕರ್ ರಾವ್ ಅವರ ವರದಿಗಾರಿಕಾ ಶೈಲಿ ವಿಶೇಷ ಹಾಗೂ ವಿಭಿನ್ನವಾಗಿತ್ತು.

Latest Indian news

Popular Stories