ನೀತಿ ಸಂಹಿತೆ ಉಲ್ಲಂಘನೆ : ದಾವಣಗೆರೆಯಲ್ಲಿ 3.98 ಲಕ್ಷ ರೂ. ನಗದು ವಶಕ್ಕೆ

ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ದಾವಣಗೆರೆ ಜಿಲ್ಲೆಯಲ್ಲಿ ಬುಧವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.98 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹೊಳೆಹರಹಳ್ಳಿ ಚೆಕ್ ಪೋಸ್ಟ್ ಬಳಿ ಮಾರ್ಚ್ 20 ರಂದು ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 3.98 ಲಕ್ಷ ನಗದು ಮತ್ತು 21 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

Latest Indian news

Popular Stories