ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ವೇತನ ಕಡಿತ

ರಾಯಚೂರು: ಮುಷ್ಕರನಿರತ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ವೇತನ ಕಡಿತ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ದಾರೆ.
ವೇತನ ಕಡಿತ ಮಾಡುವುದರ ಜೊತೆಗೆ ಶಿಸ್ತು ಕ್ರಮ ಜರುಗಿಸುವ ಕಡಕ್ ಎಚ್ಚರಿಕೆಯನ್ನೂ ಸಿಎಂ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸಾರಿಗೆ ನೌಕರರ ಮುಷ್ಕರದ ವಿಚಾರದಲ್ಲಿ ಯಾರನ್ನೂ ಮಾತುಕತೆಗೆ ಕರೆಯುವುದಿಲ್ಲ. ನೌಕರರು ಗೌರವದಿಂದ ಕೆಲಸಕ್ಕೆ ಹಾಜರಾಗಬೇಕು. ಬಸ್ ಗಳನ್ನು ಓಡಿಸದಿದ್ದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಚರ್ಚೆ ನಡೆಸಿದ್ದು, ಹಲವು ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ಸಾರಿಗೆ ನೌಕರರ ಪ್ರತಿಭಟನೆಗೆ ಬಗ್ಗುವ ಪ್ರಶ್ನೆಯೇ ಇಲ್ಲ. ಪ್ರತಿಭಟನೆ ಮುಂದುವರಿಸಿದರೆ ಸಂಬಳ ಕಡಿತ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಉದ್ಯೋಗಿಗಳನ್ನ ಕೆಲಸದಿಂದ ತೆಗೆಯುವಂತಿಲ್ಲ. ರಾತ್ರಿ ಕರ್ಫ್ಯೂ ನೆಪದಲ್ಲಿ ರಾತ್ರಿ ಪಾಳಿ ಉದ್ಯೋಗಿಗಳನ್ನ ತೆಗೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Latest Indian news

Popular Stories