
ಬಿಎಸ್‌ವೈ ರಾಜೀನಾಮೆ ಯಾವಾಗ ಗೊತ್ತೇ ?
ಬೆಂಗಳೂರು : ಬಿಜೆಪಿ ಹೈಕಮಾಂಡ್ ಸೂಚನೆಯಂತೆ ತಾವು ನಡೆದುಕೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದರೊಂದಿಗೆ ಬಿಎಸ್‌ವೈ ಯಾವಾಗ ಪದತ್ಯಾಗ ಮಾಡಬಹುದು ಎಂಬ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ ಜುಲೈ 26 ರಂದು ಬೆಳಗ್ಗೆ 11 ಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ.
ಈ ವಿಷಯವನ್ನು ದೆಹಲಿಯ ಉನ್ನತ ಮೂಲಗಳು ಖಚಿತಪಡಿಸಿವೆ. ಜುಲೈ 26 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸಿಎಂ ಹುದ್ದೆಗೆ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
ಜುಲೈ 25 ರಂದು ವರಿಷ್ಟರು ಅಧಿಕೃತ ಸೂಚನೆ ನೀಡಲಿದ್ದು ಇದರ ಸುಳಿವಿರುವ ಯಡಿಯೂರಪ್ಪ ರಾಜ್ಯಪಾಲರ ಭೇಟಿಗಾಗಿ ಸಮಯಾವಕಾಶ ಕೋರಿದ್ದರು.
ಯಡಿಯೂರಪ್ಪ ಅವರ ಭೇಟಿಗೆ ರಾಜ್ಯಪಾಲರು ಸಮಯ ನೀಡಿದ್ದಾರೆ. ರಾಜೀನಾಮೆ ನೀಡಿದ ನಂತರ ತಮ್ಮ ಸರ್ಕಾರದ ಎರಡು ವರ್ಷಗಳ ಸಾಧನೆಯ ಬಗ್ಗೆ ಯಡಿಯೂರಪ್ಪ ನಾಡಿನ ಜನರಿಗೆ ವಿವರಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ರಾಜ್ಯದ ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆAದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂಬುದಾಗಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇದು ಸಹ ಅವರ ಪದತ್ಯಾಗ ಖಚಿತ ಎನ್ನುವುದಕ್ಕೆ ಸಾಕ್ಷಿಯಾಗಿದೆ.




