ಶಿವಮೊಗ್ಗ, ಫೆಬ್ರವರಿ 24: ಯಡಿಯೂರಪ್ಪ ಮೊದಲ ಬಾರಿ ಸಿಎಂ ಆದಾಗ ಒಂದು ಸೀರೆ,ಒಂದು ಸೈಕಲ್ ನೀಡಿದ್ದರು.ಅದನ್ನು ಬಿಟ್ಟರೆ ಬಿಜೆಪಿ ಬೇರೆ ಏನೂ ನೀಡಿಲ್ಲ.ಆ ಸೈಕಲ್ ಎಲ್ಲಿ ಹೋಯ್ತು.ಅದನ್ನು ಯಾಕೆ ನಿಲ್ಲಿಸಿದಿರಿ? ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.ಶಿವಮೊಗ್ಗದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಬಿಜೆಪಿ ಸ್ನೇಹಿತರೇ ನೀವು ನಾಲ್ಕು ವರ್ಷ ಅಧಿಕಾರ ನಡೆಸಿದ್ದೀರಿ.
ಜನರ ಬದುಕು ಕಟ್ಟಿಕೊಡಲು ಯಾವುದಾದರೂ ಒಂದು ಯೋಜನೆ ನೀಡಿದ್ದೀರಾ? ಅದನ್ನು ಜನರಿಗೆ ತಿಳಿಸಿ.ಈ ಭಾಗದ ಶಾಸಕರಾದ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದರು.ಅವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಅರಗ ಜ್ಞಾನೇಂದ್ರ 420 ಗ್ಯಾರಂಟಿ ಎಂದಿದ್ದಾರೆ.
ಅರಗ ಜ್ಞಾನೇಂದ್ರ ನಿನಗೆ ಜ್ಞಾನ ಇದೆಯಾ? ನಿನಗೆ ಇರೋದು ಅರ್ಧ ಜ್ಞಾನ ಮಾತ್ರ ಎಂದು ಹೇಳಿದರು.ಅಲ್ಲಮ ಪ್ರಭುಗಳು ಒಂದು ಮಾತು ಹೇಳಿದ್ದಾರೆ.ಕೊಟ್ಟ ಕುದುರೆ ಎರಲಾಗದೆ ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ.
ಅಧಿಕಾರ ಇದ್ದಾಗ ಏನೂ ಮಾಡದೇ, ಅಧಿಕಾರ ಕಳೆದುಕೊಂಡ ನಂತರ ಈಗ ಮೋದಿ ಗ್ಯಾರಂಟಿ ಎಂದು ಅರಿಯುತ್ತೇನೆ ಎಂದರೆ ಏನು ಪ್ರಯೋಜನ? ನೀವು ಅಧಿಕಾರದಲ್ಲಿದ್ದಾಗ ಇಂತಹ ಒಂದು ಯೋಜನೆ ನೀಡಲಿಲ್ಲ.ನೀವು ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದಿರಿ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದಿರಿ. ಹೇಳಿದಂತೆ ಮಾಡಿದಿರಾ?ಎಂದು ಸವಾಲು ಹಾಕಿದರು.