ಶಿವಮೊಗ್ಗ :ಬಿಜೆಪಿಯಲ್ಲಿ ಯಡಿಯೂರಪ್ಪನ ಹಾಗೆ ದೊಡ್ಡ ನಾಯಕರು ಯಾರೂ ಇಲ್ಲ. ಅವರನ್ನು ಮೂಲೆಗುಂಪು ಮಾಡಿದ ಮೇಲೆ ಬಿಜೆಪಿ ನೆಲಕಚ್ಚಿದೆ ಎಂದು ಮಾಜಿ ಸಿಎಂ ಸದಾನಂದಗೌಡರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಯಡಿಯೂರಪ್ಪ ಅವರನ್ನು ಮೂಲೆಗೆ ಕೂರಿಸಿದ್ದಾರೆ. ಯಡಿಯೂರಪ್ಪ ಮೂಲೆಗೆ ಸೇರಿದ ಮೇಲೆ ಆ ಪಕ್ಷಕ್ಕೆ ನಾಯಕರೇ ಇಲ್ಲ. ಹೀಗಿದ್ದರೂ ಕಾಂಗ್ರೆಸ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡ್ತಿದೆ. ಈಶ್ವರಪ್ಪ ನೀರಾವರಿ ಸಚಿವರಾಗಿದ್ದರು. ಸಚಿವರಾಗಿದ್ದಾಗ ಯಾವಾಗಲೂ ನೀರಾವರಿ ವಿಷಯ ಮಾತನಾಡಲಿಲ್ಲ. ಅವರು ಮಾತನಾಡಿದ್ದು ಯಾವಾಗಲು ಶಿವಮೊಗ್ಗಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದರು ಎಂದು ಕಿಡಿ ಕಾರಿದರು.