ರಾಜ್ಯದಲ್ಲಿ ʻಝೀಕಾ ವೈರಸ್ʼ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿ‌ದ್ದು, ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಡೆಂಘೀ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರುವ ಪರಿಹಾರ ಕ್ರಮ, ಸೊಳ್ಳೆ ನಿಯಂತ್ರಣ ಮಾಡಲು ಮಾಡಬೇಕಿರುವ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ

ಝೀಕಾ ವೈರಸ್‌ನ ಸೋಂಕು ಉಂಟಾದರೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಸೇವನೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿ ಪಡೆಯುವ ಜತೆಗೆ ಸಾಕಷ್ಟು ವಿಶ್ರಾಂತಿ ಪಡೆಯಬೇಕು. ಸೋಂಕು ಬೇರೆಯವರಿಗೆ ಹರಡದಂತೆ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

Latest Indian news

Popular Stories