ಬೀದರ್ (ಏ.29): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಲಗಿ, ನಾಗನಕೇರಾ, ಬನ್ನಳ್ಳಿ, ಉಡಬಾಳ, ನಿರ್ಣಾವಾಡಿ, ಬಸಲಾಪೂರ, ಅಲಿಪೂರ ತಾಂಡ ಸೇರಿದಂತೆ ಹಲವೆಡೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚನೆ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿದರು.
ಬೀದರ್ ದಕ್ಷಿಣ ಕ್ಷೇತ್ರದ 7ಕ್ಕೂ ಹೆಚ್ಚು ಗ್ರಾಮ, ತಾಂಡಗಳಿಗೆ ಶುಕ್ರವಾರ ಸಂಜೆ ಭೇಟಿ ನೀಡಿ ಮತಯಾಚನೆ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಗಳ, ತಾಂಡಗಳ ಜನರು ಬಾಜಾ ಭಜಂತ್ರಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಈ ವೇಳೆ ಶಾಸಕರು ಗ್ರಾಮ, ತಾಂಡಗಳ ದೇವಸ್ಥಾನ, ಚರ್ಚ್, ದರ್ಗಾ ಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು.
ಮತಯಾಚನಾ ಯಾತ್ರೆಯ ನಡುವೆ ಬೀದರ್ ದಕ್ಷಿಣ ಕ್ಷೇತ್ರದ ನೀಡವಂಚಾ, ಬನ್ನಳ್ಳಿ, ಉಡಬಾಳ, ಮನ್ನಾಎಖೇಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಗ್ರಾಮ ಪಂಚಾಯತಿ ಸದಸ್ಯರು, ವಿವಿಧ ಪಕ್ಷಗಳ ಮುಖಂಡರು, ನೂರಾರು ಸಂಖ್ಯೆಯ ಕಾರ್ಯಕರ್ತರನ್ನು ಜೆಡಿಎಸ್ ಶಾಲು ಹೊದಿಸಿ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಅವರು, ನಾನು ಕುಮಾರಸ್ವಾಮಿರವರ ಸರ್ಕಾರದಲ್ಲಿ ಎರಡು ಬಾರಿ ಸಚಿವನಾಗಿದ್ದೇನೆ. ಸಚಿವನಾಗಿದ್ದಾಗಲೆಲ್ಲಾ ನಾಡಿನ ಒಳಿತಿಗಾಗಿ ಅನೇಕ ಮಹತ್ವದ ಯೋಜನೆಗಳನ್ನು ನೀಡುವ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿರವರ ಸರ್ಕಾರದ ವೇಳೆ ರೈತರ ಸಾಲಮನ್ನಾ ಸೇರಿದಂತೆ ಅನೇಕ ಮಹತ್ವದ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಮುಂದೆಯೂ ಅನೇಕ ಮಹತ್ವದ ಯೋಜನೆಗಳನ್ನು ನೀಡುತ್ತೇವೆ. ಬೀದರ್ ದಕ್ಷಿಣ ಕ್ಷೇತ್ರದ ಹಾಗೂ ನಾಡಿನ ಜನತೆಗೆ ಜೆಡಿಎಸ್ ಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ನಾವು ಅಧಿಕಾರದಲ್ಲಿ ಇದ್ದಾಗ ಜಾರಿಗೆ ತಂದ ಕಾರ್ಯಕ್ರಮಗಳ ಬಗ್ಗೆ ಹಾಗೂ ನಮ್ಮ ಪಕ್ಷದ ಪ್ರಣಾಳಿಕೆಗಳ ಬಗ್ಗೆ ನಾಡಿನ ಜನತೆಗೆ ತಿಳಿಸಬೇಕಾಗಿದೆ. ಆ ಮೂಲಕ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಬೇಕಾಗಿದೆ. ಪಕ್ಷದ ಮುಖಂಡರು ಕಾರ್ಯಕರ್ತರು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದರು.