ಶ್ರೀಗಂಧದ ಮರಗಳ್ಳರ ಬಂಧನ:ಆರೋಪಿಗಳಿಂದ 4.52 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಬೀದರ, ಜುಲೈ 21 ಹುಮನಾಬಾದ ಕನಕಟ್ಟಾ ರಸ್ತೆ ಎಡಭಾಗದ ದ್ರಾಕ್ಷಿ ತೋಟದಲ್ಲಿ ಜುಲೈ 20 ರಂದು ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆ ಕಡೆಯುತ್ತಿರುವ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಪೋಲಿಸ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನ ಆರೋಪಿಗಳನ್ನು ಬಂಧಿಸಿ ಅವರಿಂದ 1 ಲಕ್ಷ 25 ಸಾವಿರ ಮೌಲ್ಯದ 39.28 ಕೆಜಿಯ 9 ಶ್ರೀಗಂಧದ ಕಟ್ಟಿಗೆ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ 1.30 ಲಕ್ಷ ಬೆಲೆಯ ಎರಡು ದ್ವೀಚಕ್ರ ವಾಹನ, 1.97 ಲಕ್ಷದ 09 ಮೋಬೈಲ್‌ಗಳು ಹಾಗೂ ಎರಡು ಕೊಡಲಿಗಳು ವಶಕ್ಕೆ ಪಡೆದು ಆರೋಪಿಗಳ ಮೇಲೆ ಕರ್ನಾಟಕ ಅರಣ್ಯ ನಿಯಮದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.


ಅವರು ಶುಕ್ರವಾರ ಬೀದರ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಕಛೇರಿ ಆವರಣದಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.
ಇತ್ತಿಚೇಗೆ ಜಿಲ್ಲೆಯಲ್ಲಿ ಶ್ರೀಗಂಧದ ಮರಗಳ ಸಾಗಾಣಿಕೆಯ ಬಗ್ಗೆ ದೂರುಗಳು ಬರುತ್ತಿದ್ದವು ಈ ಹಿನ್ನೆಲೆಯಲ್ಲಿ ಪೋಲಿಸ ಇಲಾಖೆ ಇಂತಹ ತಂಡಗಳ ಮೇಲೆ ನಿಗಾವಹಿಸಿತು ಆದ್ದರಿಂದ ಈ ಪ್ರಕರಣವನ್ನು ಭೇದಿಸಲು ಸಾಧ್ಯವಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಶ್ರೀಗಂಧದ ಕಳ್ಳ ಸಾಗಾಣಿಕೆ ಮೂಲವನ್ನು ಬೇಧಿಸಲು ಅರಣ್ಯ ಇಲಾಖೆ ಹಾಗೂ ಪೋಲಿಸ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲಿದೆ ಎಂದರು.


ಅದೇ ರೀತಿ ನಗರದಲ್ಲಿ ದ್ವೀಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಮಾರ್ಕೆಟ್ ಪೋಲಿಸ ಠಾಣೆಯ ಪೋಲಿಸರ ತಂಡ ಕಾರ್ಯಾಚಣೆ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ 2ಲಕ್ಷ 10 ಸಾವಿರ ಮೌಲ್ಯದ ಎರಡು ದ್ವೀಚಕ್ರ ವಾಹನಗಳÀನ್ನು ಜಪ್ತಿ ಮಾಡಿ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.


ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎA ಮಾತನಾಡಿ. ಜಿಲ್ಲೆಯಲ್ಲಿ ಸಾಕಷ್ಟು ಶ್ರೀಗಂಧದ ಅಕ್ರಮ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಪ್ರಕರಣಗಳು ವರದಿಯಾಗುತ್ತಿವೆ. ಆದರೆ ಇವುಗಳನ್ನು ಮಟ್ಟ ಹಾಕಲು ಜಿಲ್ಲೆಯ ಸಾರ್ವಜನಿಕರು ಹಾಗೂ ರೈತರ ಸಹಕಾರ ಮುಖ್ಯವಾಗಿದೆ ಮುಂದಿನ ದಿನಗಳಲ್ಲಿ ರೈತರು ತಮ್ಮ ಹೊಲಗಳಲ್ಲಿ ಶ್ರೀಗಂಧ ಮರಗಳ ಕಳ್ಳತನ ಅಥವಾ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂತಹ ಮರಗಳನ್ನು ಕಡಿಯುವುದು ಕಂಡು ಬಂದಲ್ಲಿ ತಕ್ಷಣ ಅರಣ್ಯ ಇಲಾಖೆ ಅಥವಾ ಪೋಲಿಸ ಇಲಾಖೆ ಮಾಹಿತಿ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಈ ಪ್ರಕರಣಗಳಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನಗದು ಬಹುಮಾನ ಪ್ರಶಂಸನ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಹುಮನಾಬಾದ ವಲಯ ಅರಣ್ಯ ಅಧಿಕಾರಿ ಶಿವಕುಮಾರ, ಪಿಎಸ್‌ಐಗಳಾದ ಉಪೇಂದ್ರಕುಮಾರ, ಕಿರಣ,ಸಂತೋಷ ತಾವರಖೇಡ ಸೇರಿದಂತೆ ಪೋಲಿಸ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest Indian news

Popular Stories