17 ಅಂಗನವಾಡಿ ಕಾರ್ಯಕರ್ತೆ, 96 ಸಹಾಯಕಿಯರ ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನ

ಬೀದರ ಜುಲೈ01 (ಕರ್ನಾಟಕ ವಾರ್ತೆ):- ಬೀದರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುಯತ್ತಿರುವ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 96 ಅಂಗನವಾಡಿ ಸಹಾಯಕಿಯರ ಸೇರಿ ಒಟ್ಟು 113 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಾವಾರು ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೇಆಧಿಕಾರಿಗಳ ಕಚೇರಿಯ ಸೂಚನಾ ಫಲಕಗಳಲ್ಲಿ, ಸಂಬAಧಿಸಿದ ನಗರಸಭೆ, ಪುರಸಭೆ, ಪಟ್ಟ ಪಂಚಾಯತ, ಗ್ರಾಮ ಪಂಚಾಯತ, ಸಂಬAಧಿಸಿದ ಅಂಗನವಾಡಿ ಕೇಂದ್ರದಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಆರೋಗ್ಯ ಉಪ ಕೇಂದ್ರ, ರಐತ ಸಂಪರ್ಕ ಕೇಂದ್ರಗಳ ಸಊಚನಾ ಫಲಕಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಇಲಾಖೆಯ ಅಂತರ್ಜಾಲದಲ್ಲಿ ನೋಡಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಜುಲೈ31ರ ಸಂಜೆ 5.30ರೊಳಗಾಗಿ ಆನ್ಲೆöನ್ ವೆಬ್ಸೈಟ್: www.anganwadirecruit.kar.nic.inಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Latest Indian news

Popular Stories