ಬೀದರ್: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ರಾಯಚೂರು ಮೂಲದ ಪೊಲೀಸ್ ಪೇದೆ ಚಂದ್ರಶೇಖರ್ (29) ಮೃತ ದುರ್ದೈವಿ. ಕಳೆದ ಐದು ವರ್ಷಗಳಿಂದ ಬೀದರ್ ನಲ್ಲಿ ಪೊಲೀಸ್ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು.
ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಚಂದ್ರಶೇಖ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬ್ರಿಮ್ಸ್ ಆಸ್ಪತೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.