ಅಂತ್ಯಕ್ರಿಯೆಗೆ ಹೋಗ್ತಿದ್ದಾಗ ಭೀಕರ ರಸ್ತೆ ಅಪಘಾತ | ನಾಲ್ವರು ಸ್ಥಳದಲ್ಲೇ ಮೃತ್ಯು

ಬೀದರ್: ಟ್ರಕ್ ಹಾಗೂ ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.

ದಸ್ತ್ ಗಿರ್ ದಾವಲಸಾಬ್ (36) ರಸೀದಾ ಸೈಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಸೇಕ್ (51) ಮೃತ ದುರ್ದೈವಿಗಳು.

ಅಂತ್ಯಕ್ರಿಯೆ ಮುಗಿಸಿ ವಾಪಸ್ ಬರುವಾಗ ಭೀಕರ ಅಪಘಾತ ನಡೆದಿದೆ. ದುರ್ಘಟನೆಯಲ್ಲಿ 10 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಬೀದರ್ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಪಟ್ಟಿರುವ ಎಲ್ಲಾ ದುರ್ದೈವಿಗಳು ಮಹಾರಾಷ್ಟ್ರದ ಉದಗೀರ್ ಮೂಲದವರು ಎನ್ನಲಾಗಿದೆ.

ಟಾಟಾ ಏಸ್ ವಾಹನದಲ್ಲಿ ಒಟ್ಟು 14 ಮಂದಿ ಇದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಉದಗೀರ್ನಿಂದ ಹೈದರಾಬಾದ್ಗೆ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗೆ 4:30ರ ಸುಮಾರಿಗೆ ನಡೆದ ರಸ್ತೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories