
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಬೀದರ ಜುಲೈ 28 (ಕರ್ನಾಟಕ ವಾರ್ತೆ): 2021-22 ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ ಕುರಿ, ಮೇಕೆ ಘಟಕ ಪೂರೈಕೆ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು: ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅದೇ ರೀತಿ 2021-22 ನೇ ಸಾಲಿನಲ್ಲಿ ಸಾಮಾನ್ಯ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿನ ವಲಸೆ ಕುರಿಗಾರರಿಗೆ ನೈಸರ್ಗಿಕ ವಿಕೋಪಗಳಿಂದ ರಕ್ಷಣೆ ಪಡೆಯುವ ಸಲುವಾಗಿ ಪರಿಕರಗಳನ್ನು ನೀಡುವ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು: ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರಬೇಕು ಹಾಗೂ ಕನಿಷ್ಟ 20 ಕುರಿ ಮೇಕೆಗಳನ್ನು ಹೊಂದಿರಬೇಕು. ಅರೆ ಸಂಚಾರಿ, ವಲಸೆ ಕುರಿಗಾರರಿಗೆ ಆದ್ಯತೆ ನೀಡಲಾಗುವುದು ಮತ್ತು ನಿಗಮದಿಂದ ವಿತರಿಸಿದ ಕುರಿಗಾರರ ಪಾಸ ಪುಸ್ತಕ ಹೊಂದಿರಬೇಕು.
ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿ., ಜನವಾಡ ರಸ್ತೆ ಬೀದರ ಅವರನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಲು ಕೋರಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಜನವಾಡ ರಸ್ತೆ, ಬೀದರ ರವರಿಗೆ ಆಗಸ್ಟ್ 13ರೊಳಗಾಗಿ ಕಛೇರಿ ಸಮಯದಲ್ಲಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯ ಪ್ರಕಟಣೆ ತಿಳಿಸಿದೆ.




