ಕುಟುಂಬ ರಾಜಕಾರಣದ ವಿರುದ್ದ ಹೋರಾಡುವೆ ಎಂದ ಭಗವಂತ ಖೂಬಾ!

ನಾನು ಭಾರತೀಯ ಜನತಾ ಪಕ್ಷದಲ್ಲಿಯೇ ಇದ್ದೇನೆ. ನನ್ನ ಹೋರಾಟ ಬಿಜೆಪಿ ವಿರುದ್ದ ಅಲ್ಲ ಎಂದು ಸಂಸದ ಭಗವಂತ ಖೂಬಾ ಸ್ಪಷ್ಟೀಕರಣ ನೀಡಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ಕುಟುಂಬ ರಾಜಕಾರಣದ ವಿರುದ್ದ ನಾನು ಹೋರಾಡಲಿದ್ದೇನೆ ಎನ್ನುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಾನು ಬಿಜೆಪಿ ಬಿಟ್ಟಿಲ್ಲ. ಯಾವ ಕಾರಣಕ್ಕೂ ಬಿಜೆಪಿ ಬಿಡುವುದೂ ಇಲ್ಲ. ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ ಎಂದು ಭಗವಂತ ಖೂಬಾ ಖಚಿತಪಡಿಸಿದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು ,60 ವರ್ಷಗಳ ಪಾಪದ ಭಾರ ಅವರ ತಲೆಯ ಮೇಲಿದೆ. ಕಳೆದ ಒಂಬತ್ತು ತಿಂಗಳಿಂದ ಹಣದ ಹೊಳೆಯನ್ನೇ ಹರಿಸಲಾಗುತ್ತಿದೆ. ಭ್ರಷ್ಟಾಚರದಿಂದ ಗಳಿಸಿದ ಹಣವನ್ನು ಚುನಾವಣೆಯಲ್ಲಿ ಹರಿಸುತ್ತಿದ್ದಾರೆ ಎಂದು ಆರೋಪಿಸಿದರು.

Latest Indian news

Popular Stories