Bidar

ಬೀದರ್ | ಅಕಾಲಿಕ ಮಳೆಗೆ ಅನ್ನದಾತ ಕಂಗಾಲು

ಬೀದರ್: ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಅನ್ನದಾತ ಕಂಗಾಲಾಗಿದ್ದು ಕಟಾವಿಗೆ ಬಂದಿದ್ದ ಬೆಳೆಯು ಹಾಳಾಗಿದೆ. ಜಿಲ್ಲೆಯ ಔರಾದ ತಾಲ್ಲೂಕಿನ ಕರಂಜಿ ಕೆ ಗ್ರಾಮದಲ್ಲಿ ರೈತರು ಬೆಳೆದಿದ್ದ ತೊಗರಿಬೆಳೆ ಕೈ ಸೇರುವ ಮುನ್ನವೇ ಮಳೆಗೆ ನಾಶ‌ವಾಗಿದೆ.

ಕಳೆದ ಕೆಲ ದಿನ ಹಿಂದೆ ಸುರಿದ ಮಳೆಗೆ ಸುಮಾರು 4 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ನಾಶ‌ವಾಗಿದೆ. ಗ್ರಾಮದ ರಾಜಕುಮಾರ್ ಎಂಬ ರೈತ ಸುಮಾರು 4 ಎಕರೆ ಜಾಗದಲ್ಲಿ 50 ಸಾವಿರ ಖರ್ಚು ಮಾಡಿ ತೊಗರಿ ಬೆಳೆ ಬೆಳೆದಿದ್ದರು. ಆದರೆ ಧಾರಾಕಾರವಾಗಿ ಸುರಿದ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

ಸಾಲದ ಸುಳಿಯಲ್ಲಿ ರೈತರು ಸಿಲುಕಿದ್ದು, ಕಳೆದ ವರ್ಷ ಸುರಿದ ಮಳೆಗೂ ಇದೇ ರೀತಿ ನಷ್ಟ ಅನುಭವಿಸಿದ್ದಾಗಿ ರೈತ ರಾಜಕುಮಾರ ಅಳಲು ತೋಡಿಕೊಂಡಿದ್ದಾರೆ. ಮಳೆಯಿಂದಾದ ಬೆಳೆ ನಷ್ಟಕ್ಕೆ ಸರ್ಕಾರದಿಂದಲೂ ಪರಿಹಾರ ಬಂದಿಲ್ಲ. ಇತ್ತ ಬೆಳೆ ಇನ್ಶೂರೆನ್ಸ್ ಮಾಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನೋವು ತೊಡಿಕೊಂಡಿದ್ದಾರೆ.

ಇದುವರೆಗೂ ಘಟನಾ ಸ್ಥಳಕ್ಕೆ ಕೃಷಿ ಇಲಾಖೆಯ ಯಾವ ಅಧಿಕಾರಿಗಳು ಭೇಟಿ ನೀಡಿಲ್ಲ. ಅಧಿಕಾರಿಗಳ ಬೇಜಜವ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ್ದು, ಈ ಬಾರಿಯಾದರೂ ಬೆಳೆ‌ ನಷ್ಟಕ್ಕೆ ಪರಿಹಾರ ಕೊಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button