ಬೀದರ್ | ವಾಟ್ಸಾಪ್ ಸ್ಟೇಟಸ್ ಇಟ್ಟು ನಂತರ ಯುವಕ ಆತ್ಮಹತ್ಯೆ

ಸೆಲ್ಪಿ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

ಬೀದರ್ : ಜಿಲ್ಲೆಯ ಬಸವಕಲ್ಯಾಣ ನಗರದ ಧರ್ಮಪ್ರಕಾಶ ಓಣಿಯ ಬಾಲಕೃಷ್ಣ ಕರೆಪ್ಪ (18) ಎಂಬ ಯುವಕ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊರಳಿಗೆ ಹಗ್ಗ ಬಿಗಿದುಕೊಂಡು ಫೋಟೊ ತೆಗೆದು ವಾಟ್ಸಾಪ್ ಸ್ಟೇಟಸ್ ಇಟ್ಟು ನಂತರ ಓಣಿಯ ಸಮುದಾಯ ಭವನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದ್ಯವ್ಯಸನಿ ಆಗಿದ್ದ ಈತ ಜೀವನದಲ್ಲಿ ಜಿಗುಪ್ಸೆಗೊಂಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಆಗಾಗ ಮನೆಯಲ್ಲಿ ಹೇಳುತ್ತಿದ್ದ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಬ್‌ಇನ್‌ಸ್ಪೆಕ್ಟರ್ ಅಂಬರೀಶ ವಾಘಮೋಡೆ ಪರಿಶೀಲಿಸಿದ್ದಾರೆ.

THG ಬೀದರ್

Latest Indian news

Popular Stories