ಕನ್ನಡ ಜ್ಯೋತಿ ರಥಯಾತ್ರೆಗೆ ಔರಾದ್‌ನಲ್ಲಿ ಸ್ವಾಗತ


ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣಗೊಂಡು 50
ಪೂರ್ಣಗೊಂಡ ಹಿನ್ನಲೆಯಲ್ಲಿ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಶನಿವಾರ ಔರಾದ(ಬಿ) ಪಟ್ಟಣದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಭವ್ಯವಾದ ಸ್ವಾಗತ ಕೋರಿದರು.

ರಥಯಾತ್ರೆ ಪಟ್ಟಣಕ್ಕೆ ಪ್ರವೇಶಿಸುತ್ತಿದ್ದಂತೆ ಕನ್ನಡಾಂಬೆ ವೃತ್ತದ ಬಳಿ ಶಾಸಕರು ರಥದಲ್ಲಿ ಅಲಂಕೃತಗೊAಡಿರುವ ಕನ್ನಡಾಂಬೆಯ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ, ಪುಷ್ಪಮನ ನಮನ ಸಲ್ಲಿಸಿದರು. ರಾಜ್ಯಾದ್ಯಂತ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬAಧಿಸಿದAತೆ ಯುವ ಜನತೆಯಲ್ಲಿ ಅರಿವು ಮೂಡಿಸುವ ಭಾಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷವಾಗಿ ರೂಪಿಸಿರುವ ಕಾರ್ಯಕ್ರಮಕ್ಕೆ ತಹಶೀಲ್ದಾರರಾದ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿAಗ್ ಠಾಕೂರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷಿö್ಮÃ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಡಾ.ಶಾಲಿವಾನ ಉದಗೀರೆ, ದಾಸ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಂ.ಅಮರವಾಡಿ, ಎಪಿಎಂಸಿ ಅಧ್ಯಕ್ಷ ದೊಂಡಿಬಾ ನರೋಟೆ ಸೇರಿದಂತೆ ಅನೇಕ ತಾಲ್ಲೂಕು ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸಂಘ-ಸAಸ್ಥೆಗಳ ಪ್ರತಿನಿಧಿಗಳು, ಸಾಹಿತಿಗಳು, ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾಕ್ಷಿಯಾದರು.

ರಥಯಾತ್ರೆ ಮೆರವಣಿಗೆಯುದ್ದಕ್ಕೂ ಕನ್ನಡ ಹಾಡುಗಳಿಗೆ ಕೆಂಪು-ಹಳದಿ ಶಾಲು ಧರಿಸಿದ್ದ ಅಧಿಕಾರಿಗಳು, ಸಂಘ-ಸAಸ್ಥೆಗಳು, ಶಾಲಾ ಮಕ್ಕಳು, ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕನ್ನಡದ ಗೀತೆಗಳಿಗೆ ಹೆಜ್ಜೆ ಹಾಕುತ್ತಾ, ಕುಣಿದು ಸಂಭ್ರಮಿಸಿದರು. ಶಾಸಕರು ಕೂಡ ಡೊಳ್ಳನ್ನು ಕೈಗೆ ಪಡೆದು ಕಲಾವಿದರ ಜೊತೆಗೆ ಲಯಕ್ಕೆ ತಕ್ಕಂತೆ ಡೊಳ್ಳು ಬಾರಿಸುತ್ತಾ ಕಲಾವಿದರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.

*1000 ಮೀಟರ್ ಧ್ವಜ ಮೆರವಣಿಗೆ:* ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಯ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಲಾಗಿದ್ದ ಒಂದು ಸಾವಿರ ಮೀಟರ್ ಕನ್ನಡ ಬಾವುಟದ ಮೆರವಣಿಗೆ ಆಕರ್ಷಕವಾಗಿತ್ತು. ವಿವಿಧ ಶಾಲಾ-ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕೈಯಲ್ಲಿ ಬಾವುಟ ಹಿಡಿದು ಕನ್ನಡದ ಜಯಘೋಷಗಳನ್ನು ಹಾಕುತ್ತಾ ಸಾಗುತ್ತಿರುವಾಗ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.

ಬಳಿಕ ಮಾತನಾಡಿದ ಶಾಸಕರು, ಕನ್ನಡ ನಾಡನ್ನು ಕಟ್ಟಿ ಬೆಳೆಸಲು ಅನೇಕ ಹೋರಾಟಗಾರರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ಕರ್ನಾಟಕ ರಾಜ್ಯವೆಂದು ಮರುನಾಮಕರಣವಾಗಿ 50 ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ಅಂತಹ ಮಹನಿಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಭಾಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸುತ್ತಿರುವ ಕನ್ನಡ ಜ್ಯೋತಿ ರಥ ಯಾತ್ರೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ನಮ್ಮ ನಾಡಿನ ಭಾಷೆ, ಕಲೆ, ಸಂಸ್ಕೃತಿಯನ್ನು ಯುವಜನತೆಗೆ ಪರಿಣಾಮಕಾರಿಯಾಗಿ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

ಮೆರವಣಿಗೆಯು ಕನ್ನಡಾಂಬೆ ವೃತ್ತದಿಂದ ಆರಂಭಗೊAಡು ತಾಲ್ಲೂಕು ಪಂಚಾಯತ್, ಬಸವೇಶ್ವರ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳ ಮುಖಾಂತರ ಅಮರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದ ಬಳಿ ಕೊನೆಗೊಂಡಿತು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಸಾಹಿತಿಗಳಾದ ಶಿವಲಿಂಗ ಹೇಡೆ ಅವರು ಕನ್ನಡ ನಾಡು, ನುಡಿಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

Latest Indian news

Popular Stories