ಬೀದರ್: ಚೆಕ್‌ಪೋಸ್ಟ್‌ಗೆ ಡಿಸಿ, ಎಸ್ಪಿ ಭೇಟಿ

ತಾಲ್ಲೂಕಿನ ಮಹಾರಾಷ್ಟ್ರ ಹಾಗೂ ತೆಲಂಗಾಣ ಗಡಿಯಲ್ಲಿರುವ ‌ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ‌ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರು ಗುರುವಾರ ಭೇಟಿ ನೀಡಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಮಗಿ ಹಾಗೂ ವನಮಾರಪಳ್ಳಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

ಯಾವುದೇ ರೀತಿಯ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗಿದೆ. ಮಹಾರಾಷ್ಟ್ರ ಹಾಗೂ‌ ತೆಲಂಗಾಣದಿಂದ ಬರುವ ಎಲ್ಲ ವಾಹನ ತಪಾಸಣೆ ಮಾಡುವಂತೆ ಚೆಕ್‌ಪೋಸ್ಟ್ ಸಿಬ್ಬಂದಿಗೆ ಸೂಚಿಸಿದರು.

Latest Indian news

Popular Stories