ರಥದ ಚಕ್ರಕ್ಕೆ ಸಿಲುಕಿ ಹೋಮ್ ಗಾರ್ಡ್ ಸಾವು

ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಉಚ್ಚಾಯಿ (ಸಣ್ಣ ರಥೋತ್ಸವ) ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಇಟಗಾ ಗ್ರಾಮದ ರಾಮ ಸಿದ್ದಪ್ಪ (31) ಮೃತಪಟ್ಟ ಸಿಬ್ಬಂದಿ.

ಬೀದರ್ ಜಿಲ್ಲೆಯ ಮತ್ತೊಬ್ಬ ಸಿಬ್ಬಂದಿ ಅಶೋಕ ರೆಡ್ಡಿ ಅವರಿಗೂ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಚೇತನ್ ಆರ್. ಮಾಹಿತಿ ನೀಡಿದರು.

ಶರಣಬಸವೇಶ್ವರರ ಜಾತ್ರಾ ಮಹೋತ್ಸವದಲ್ಲಿ ಸಂಪ್ರದಾಯದಂತೆ ಉಚ್ಚಾಯಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ರಥದ ಬಳಿ ಸಾಗುತ್ತಿದ್ದ ಭಕ್ತರನ್ನು ನಿಯಂತ್ರಿಸಲು ಮುಂದಾದ ರಾಮ ಅವರು ರಥದಡಿ ಸಿಲುಕಿದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟರು.

Latest Indian news

Popular Stories