ಬೀದರ್ | ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಏ. 17 ರಂದು ಬಸವಕಲ್ಯಾಣದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಹಿಂದೂ ಧರ್ಮದ ವ್ಯಕ್ತಿ ಮತ್ತು ಅನ್ಯಕೋಮಿನ ಮಹಿಳೆ ಕುಳಿತಿರುವುದನ್ನು ಗಮನಿಸಿದ ಯುವಕರ ತಂಡ ಅವರ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದೆ.

ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಏಪ್ರಿಲ್ 17ರಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಇದನ್ನು ಗಮನಿಸಿದ ಬಸವಕಲ್ಯಾಣ ಠಾಣೆ ಪೊಲೀಸರು ನೈತಿಕ ಪೊಲೀಸ್ ಗಿರಿ ನಡೆಸಿದ ಅನ್ಯಕೋಮಿನ ಯುವಕರನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.

Latest Indian news

Popular Stories