ಕರ್ನಾಟಕದ ಮೂಲಕ ಅಕ್ರಮವಾಗಿ ನೆರೆ ರಾಜ್ಯಕ್ಕೆ ಸಾಗಿಸುತ್ತಿದ್ದ ಗಾಂಜಾ ಬೀದರ್ ಹಾಗೂ NCB ಬೆಂಗಳೂರು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.
ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ತೆರಳುವಾಗ ಔರಾದ್‌ನ ವನಮಾರಪಳ್ಳಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ.
ಬೀದರ್ ಹಾಗೂ NCB ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸುಮಾರು 15.50 ಕೋಟಿ ಮೌಲ್ಯದ 1596 ಕೆಜಿ ಗಾಂಜಾ ಸೀಜ್ ಮಾಡಿದ್ದಾರೆ ಪೊಲೀಸರು.
ತಪಾಸಣೆ ವೇಳೆ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದ್ದು, ಹುಮನಾಬಾದ್ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಈ ಸಂಬಂದ ನಾರ್ಕೊಟಿಕ್ ಕ್ರೈಮ್ ಬ್ಯುರೊ (NCB) ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಪ್ರಮುಖ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ಈ ಹಿಂದೆಯೂ ಅಕ್ರಮ ಗಾಂಜಾ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.