ಬೀದರ್: ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಕ್ಕಿ ವಶ

ಬೀದರ್ : ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೀದರ್ ನಗರದ ಗೋಲೆಖಾನ್ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಒಟ್ಟು 4 ಲಕ್ಷ ರೂ. ಗೂ ಅಧಿಕ ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಹುಮ್ನಾಬಾದ್ ತಾಲೂಕಿನ ಚಿದ್ರಿಯಲ್ಲೂ ಅಕ್ರಮವಾಗಿ ಸಾಗಿಸುತ್ತಿದ್ದ 34 ಸಾವಿರ‌ ರೂ.ಮೌಲ್ಯದ 10 ಕ್ವಿಂಟಲ್ ಅಕ್ಕಿಯನ್ನು ಜಪ್ತಿ‌ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಈ ಕುರಿತು ತನಿಖೆ ಕೈಗೊಂಡಿದ್ದಾರೆ.

Latest Indian news

Popular Stories