ಸಿಎಂ ನಿರ್ದೇಶನ: ಸಚಿವರಿಂದ ವಿವಿಧ ಕಾರ್ಯಕ್ರಮ

ಬೀದರ ಆಗಸ್ಟ್ 8 (ಕರ್ನಾಟಕ ವಾರ್ತೆ): ಕೋವಿಡ್-19 ಮೂರನೇ ಅಲೆ ತಡೆಗೆ ಸಂಬAಧಿಸಿದAತೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ಬೀದರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ರಾಜ್ಯ ಸಚಿವ ಸಂಪುಟದ ಎಲ್ಲ ಸಚಿವರು ಆಯಾ ಜಿಲ್ಲೆಗಳಲ್ಲಿ ಕೋರೊನಾ ಮೂರನೇ ಅಲೆ ತಡೆಗೋಸ್ಕರ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮೊದಲ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಎಲ್ಲ ಸಚಿವರಿಗೆ ನಿರ್ದೇಶನ ನೀಡಿದ್ದು, ಅದರನ್ವಯ ಸಚಿವರಾದ ಪ್ರಭು ಚವ್ಹಾಣ್ ಅವರು ಆಗಸ್ಟ್ 9ರಂದು ಜಿಲ್ಲೆಯ ವಿವಿಧೆಡೆಯಲ್ಲಿ ಬಾರ್ಡರ್ ಚೆಕ್‌ಪೋಸ್ಟ್ ಭೇಟಿ ಮತ್ತು ಪರಿಶೀಲನೆ, ಸಾರ್ವಜನಿಕ ಆಸ್ಪತೆಗೆ ಭೇಟಿ ಮತ್ತು ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಮತ್ತು ಲಸೀಕಾರಣ ಪರಿಶೀಲನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಸಚಿವರ ಮನವಿ: ತಾವು ಜಿಲ್ಲೆಯ ಆಯಾ ಕಡೆಗಳಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕು. ಕೋವಿಡ್ ಸೋಂಕು ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಮಾಸ್ಕ ಧರಿಸುವುದನ್ನು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳವಂತಹ ಎಲ್ಲ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯನ್ನು ಸಾರ್ವಜನಿಕರು ಮುಂದುವರೆಸಬೇಕು ಎಂದು ಸಚಿವರಾದ ಚವ್ಹಾಣ್ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Latest Indian news

Popular Stories