Bidar

ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ದಾಳಿ

ನಗರದ ಬಸವೇಶ್ವರ ಚೌಕ ಬಳಿ ಇರುವ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯ ಮೇಲೆ ಐಟಿ‌ ದಾಳಿ ನಡೆದಿದೆ.

ಬ್ಯಾಂಕ್ ಮ್ಯಾನೇಜರ್ ಸೇರಿ ಸಿಬ್ಬಂದಿಯ ಫೋನ್ ಆಫ್ ಮಾಡಿಸಿ ತನಿಖೆ ನಡೆಸಲಾಗುತ್ತಿದೆ. ಸರಿ ಸುಮಾರು 15 ರಿಂದ 20 ಅಧಿಕಾರಿಗಳ ತಂಡ ದಾಳಿ ನಡೆಸಿರುವ ಕುರಿತು ತಿಳಿದು ಬಂದಿದೆ.

ರಾಯಚೂರು,ಕಲಬುರ್ಗಿ,ಬಿಜಾಪುರದ IT ಅಧಿಕಾರಿಗಳಿಂದ ದಾಳಿ ನಡೆದಿದೆ. ಬೀದರ್ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
ಸಹೋದರ ಅಮರ್ ಖಂಡ್ರೆ ಬ್ಯಾಂಕ್ ನ ಅಧ್ಯಕ್ಷರಾಗಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ನಡೆದ ಬ್ಯಾಂಕ್ ಚುನಾವಣೆಯಲ್ಲಿ ಅಮರ್ ಖಂಡ್ರೆ ಗೆಲುವು ಸಾಧಿಸಿದ್ದರು. ಸಾಗರ್ ಖಂಡ್ರೆ ಇವಾಗ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಹೊತ್ತಲ್ಲಿ ಈ ದಾಳಿ ರಾಜಕೀಯ ಪ್ರೇರಿತವೇ ಎಂಬ ಕುರಿತು ಚರ್ಚೆ ಆರಂಭವಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button