ಬೀದರ್ : ಹೊಲದಲ್ಲಿ ಬೆಳೆದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬು ಸುಟ್ಟಿರುತ್ತದೆ ಎಂದು ದೂರು ನೀಡಿದ ರೈತನ ಹತ್ತಿರ ಪಂಚನಾಮೆ ಸಂಧರ್ಭದಲ್ಲಿ ರೈತರಿಂದ ಹಣಕ್ಕೆ ಬೇಡಿಕೆಯಿಟ್ಟಿ ಪೊಲೀಸ್ ಅಧಿಕಾರಿ ಸಸ್ಪೆಂಡ್ ಅದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹುಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೇಲೂರು ಗ್ರಾಮದ ಫಿರ್ಯಾದಿಯೊಬ್ಬರು ತಮ್ಮ ಹೊಲದಲ್ಲಿ ಬೆಳೆದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬು ಸುಟ್ಟಿರುತ್ತದೆ ಎಂದು ದೂರು ನೀಡಿದ್ದು ,ಪಂಚನಾಮ ಸಂಧರ್ಭದಲ್ಲಿ ಪೊಲೀಸ್ ಅಧಿಕಾರಿ ಎ ಎಸ್ ಐ ಶಾವೂರಾಜ್ ರೈತನಿಂದ ಹಣಕ್ಕೆ ಬೇಡಿಕೆಯಿಟ್ಟು, ಅನುಚಿತವಾಗಿ ವರ್ತನೆ ತೋರಿದ್ದು ಪ್ರಾಥಮಿಕ ತನಿಖೆಯಿಂದ ಸಾಬೀತಾದ ಹಿನ್ನಲೆ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ, ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್ ಎಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.