ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನೂತನ ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಮೊಬೈಲ್‌ಗಳನ್ನು ಕಳೆದುಕೊಂಡಿದ್ದ ಸಾರ್ವಜನಿಕರು ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸಿದ್ದರು.
ಜಿಲ್ಲಾ ಪೊಲೀಸರು ಒಟ್ಟು 52 ಮೊಬೈಲ್‌ಗಳನ್ನು ಪತ್ತೆ ಮಾಡಿದ್ದು, ಎಸ್‌ಪಿ ಕಚೇರಿ ಆವರಣದಲ್ಲಿ ಸೋಮವಾರ ವಾರಸುದಾರರಿಗೆ ಮೊಬೈಲ್‌ಗಳನ್ನು ಹಿಂದಿರುಗಿಸಲಾಯಿತು.