ಮಾಜಿ ಸಚಿವ ‘ಪ್ರಭು ಚೌವ್ಹಾಣ್’ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೀದರ್: ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಕಳೆದ 3 ದಿನಗಳ ಹಿಂದೆ ಎದೆಬಡಿತದಲ್ಲಿ ಏರುಪೇರಾಗಿ ಮುಂಬೈನ ಬಾಂದ್ರಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎದೆ ಬಡಿತದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಔರಾದ್ ನ ನಿವಾಸದಲ್ಲಿ ಇದ್ದಂತ ವೇಳೆಯಲ್ಲಿ ಎದೆಬಡಿತದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.

2022ರಲ್ಲೇ ಇದೇ ರೀತಿ ಎದೆಬಡಿತದಲ್ಲಿ ಏರುಪೇರಾಗಿ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಮಾಜಿ ಸಚಿವ, ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

Latest Indian news

Popular Stories