ಬೀದರ್ : ನಗರದ ಕನ್ನಡ ಭವನ ಉದ್ಘಾಟನಾ ಕಾರ್ಯಕ್ರಮದ ವೇಳೆ ರಾಜ್ಯದ ಅರಣ್ಯ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಈಶ್ವರ ಖಂಡ್ರೆ ಅವರ ವಾಹನಕ್ಕೆ ಮುತ್ತಿಗೆ ಹಾಕಿ ಕಾರಂಜಾ ಸಂತ್ರಸ್ತರು ಪ್ರತಿಭಟನೆ ನಡೆಸಿದ್ದರು.
ಕಳೆದ ಎರಡು ವರ್ಷಗಳಿಂದ ಜಿಲ್ಲಾ ಉಸ್ತವಾರಿ ಸಚಿವರ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಮಾಡುತ್ತಿರುವ ರೈತರು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಹಲವು ಬಾರಿ ಒತ್ತಾಯಿಸಿದ್ದರು, ಸಚಿವರು ಕೇವಲ ಭರವಸೆ ಕೊಟ್ಟು ಕೈತೊಳೆದುಕೊಳ್ಳುತ್ತಿರುವ ಹಿನ್ನೆಲೆ, ಸಚಿವರ ವಾಹನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಯನ್ನು ಮಾಡಿದ್ದರು.ಇದೇ ವೇಳೆ ಸಚಿವ ಈಶ್ವರ ಖಂಡ್ರೆ ರೈತರ ಜೊತೆ ಮಾತುಕತೆ ನಡೆಸಿ ಮತ್ತೆ ಪರಿಹಾರದ ಭರವಸೆಯನ್ನು ನೀಡಿ ತೆರಳಿದ್ದರು.