Bidar

ವರ್ಷಕ್ಕೆ 5 ಲಕ್ಷ ಸಂಪಾದನೆ ಮಾಡಿ ಇತರರಿಗೆ ಮಾದರಿಯಾದ ಭಾಲ್ಕಿ ತಾಲ್ಲೂಕಿನ ರೈತ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ರೈತ ಸಂಜು ಪ್ರಭಾ ಅವರು ಎರಡು ಎಕರೆಯಲ್ಲೇ ಸೀತಾಫಲ ಬೆಳೆಸಿ ವರ್ಷಕ್ಕೆ ಸುಮಾರು 5 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ವೈಜ್ಞಾನಿಕವಾಗಿ ಸಮಗ್ರ ಕೃಷಿ ಪದ್ದತ್ತಿಯನ್ನ ಅಳವಡಿಸಿಕೊಂಡು ಆದಾಯವನ್ನ ಹೇಗೆ ಗಳಿಸಬುದೆಂದು ಸಾಧಿಸಿ ತೋರಿಸುತ್ತಿರುವ ಈ ರೈತ, ಜಿಲ್ಲೆಗೆ ಮಾದರಿಯಾಗಿ ನಿಂತಿದ್ದಾರೆ.

ರೈತ ಸಂಜು ಪ್ರಭಾ ಅವರು ಎರಡು ಎಕರೆಯಲ್ಲೇ ಸೀತಾಫಲ ಬೆಳೆಸಿ ವರ್ಷಕ್ಕೆ ಸುಮಾರು 5 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಕಠಿಣ ಪರಿಶ್ರಮದಿಂದ ಎರಡು ಎಕರೆಯಲ್ಲಿ ಬೆಳೆದ ಸೀತಾಫಲ ಹಣ್ಣಿನಿಂದ ಆರ್ಥಿಕತೆ ಬಲಪಡಿಸಿಕೊಂಡು ಇತರೆ ಸಣ್ಣ ರೈತರಿಗೆ ಮಾದರಿಯಾಗಿದ್ದಾರೆ.

ತೋಟಗಾರಿಕೆ ಅಧಿಕಾರಿಗಳ ಪ್ರೇರಣೆಯಿಂದ ಸೀತಾಫಲ ಬೆಳೆಯಲು ನಿರ್ಧರಿಸಿ, ತೆಲಂಗಾಣ ರಾಜ್ಯದ ಸಂಗಾರೆಡ್ಡಿಯಿಂದ 2020ರಲ್ಲಿ ಗೋಲ್ಡನ್ ತಳಿಯ 800 ಸೀತಾಫಲ ಸಸಿಗಳನ್ನು ತಂದು ಎರಡು ಎಕರೆಯಲ್ಲಿ ಸಾಲಿನಿಂದ ಸಾಲಿಗೆ ಹಾಗೂ ಗಿಡದಿಂದ ಗಿಡಕ್ಕೆ 12×12 ಅಡಿ ಅಂತರದಲ್ಲಿ ಗಿಡಗಳನ್ನ ನಾಟಿ ಮಾಡಿದ್ದಾರೆ. ಈ ಗಿಡಗಳು ಹುಲುಸಾಗಿ ಬೆಳೆದು ಮೂರು ವರ್ಷಕ್ಕೇ ಫಸಲು ನೀಡಲು ಪ್ರಾರಂಭಿಸಿದ್ದರಿಂದ ಮೊದಲನೇ ಫಸಲಿನಲ್ಲಿ ಸುಮಾರು ಎರಡು ಲಕ್ಷ ರೂಪಾಯಿ ಆದಾಯ ಗಳಿಸಿರುವೆ ಎಂದು ರೈತ ಸಂಜು ಪ್ರಭ ಹೇಳುತ್ತಿದ್ದಾರೆ.

ಕೆಜಿಗೆ 50 ರೂಪಾಯಿ ದರ ಸಿಕ್ಕರೂ ಕೂಡಾ ಎಕರೆಗೆ ಎರಡುವರೆ ಲಕ್ಷ ರೂಪಾಯಿ ಆದಾಯ ಪಡೆಯಬಹುದೆಂದು ರೈತ ಹೇಳುತ್ತಿದ್ದಾರೆ. ಇನ್ನು ಒಕ್ಕಲುತನ ಮಾಡುವುದೆಂದರೇ ಮೂಗು ಮುರಿಯುವಂಥ ಜನರೇ ಹೆಚ್ಚು. ಭೂತಾಯಿಯನ್ನು ನಂಬಿ ಶ್ರದ್ಧಾಭಕ್ತಿಯಿಂದ ಹಗಲಿರುಳು ದುಡಿಯುತ್ತಿದ್ದುದರಿಂದ ಭೂತಾಯಿ ಒಲಿದು ನನ್ನ ಆರ್ಥಿಕಮಟ್ಟ ಗಣನೀಯವಾಗಿ ಸುಧಾರಿಸಿದೆ.

ನನ್ನ ಪತ್ನಿ ಮತ್ತು ಇಬ್ಬರು ಗಂಡುಮಕ್ಕಳು ಕೃಷಿಕಾರ್ಯಗಳಲ್ಲಿ ನೆರವಾಗುತ್ತಿರುವುದರಿಂದ ಕೂಲಿಯಾಳು ಖರ್ಚಿಲ್ಲ. ಸರ್ಕಾರದ ಸಹಾಯ ಸೌಲಭ್ಯ, ಕೃಷಿ ವಿಜ್ಞಾನಿಗಳ ಸಲಹೆಯಂತೆ ಮೈಮುರಿದು ದುಡಿದರೆ ಆರ್ಥಿಕತೆಯನ್ನು ಬಲಪಡಿಸಿಕೊಳ್ಳಬಹುದು. ಇದಕ್ಕೂ ಮುನ್ನ ಮಳೆಯಾಧಾರಿತ ಕೃಷಿಯಿಂದ ತೀವ್ರ ಬಡತನ ಕಾಡುತ್ತಿತ್ತು. ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾ ಸ್ಥಿತಿ ನಿರ್ಮಾಣವಾಗಿತ್ತು ಆದರೆ ತೋಟಗಾರಿಕೆ ಬೆಳೆ ಬೆಳೆಯಲು ಶುರು ಮಾಡಿದಾಗಿನಿಂದ ಸುಖವಾಗಿದ್ದೇನೆ ಎಂದು ರೈತ ಸಂಜು ಪ್ರಭ THG ಕನ್ನಡಗೆ ಹೇಳುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button