Bidar

ಬೀದರ ವಿಶ್ವವಿದ್ಯಾಲಯದಲ್ಲಿ ಖಾಲಿ ಉಳಿದಿರುವ ಸ್ನಾತಕೋತ್ತರ ಸೀಟುಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬೀದರ್ : ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಸ್ನಾತಕೋತ್ತರ ಪದವಿಯ ಮೊದಲ ಹಂತದ ಪ್ರವೇಶ ಪ್ರಕ್ರಿಯೆ ಮುಕ್ತಾಯವಾಗಿದ್ದು, ಬೀದರ ವಿಶ್ವವಿದ್ಯಾಲಯದ ಮುಖ್ಯ ಆವರಣ ಹಾಗೂ ಬೀದರ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿಯ ಮಹಾವಿದ್ಯಾಲಯಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಆಸಕ್ತರು ಬೀದರ ವಿಶ್ವವಿದ್ಯಾಲಯಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಅರ್ಜಿಯನ್ನು ದಿನಾಂಕ 06-01-2024ರಂದು 12-01-2024ರವರೆಗೆ ಸಲ್ಲಿಸಲು ಅವಕಾಶವಿದೆ.ಭರ್ತಿ ಮಾಡಿದ ಅರ್ಜಿಯ ಹಾರ್ಡ್ ಕಾಪಿಯನ್ನು ದಿನಾಂಕ: 12-01-2024ರ ಒಳಗಾಗಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಲು ತಿಳಿಸಲಾಗಿದೆ. ದಿನಾಂಕ 17-01-2024 ಹಾಗೂ 18-01-2024ರಂದು ಪ್ರವೇಶ ಪ್ರಕ್ರಿಯೆ ನಡಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಬೀದರ ವಿಶ್ವವಿದ್ಯಾಲಯದ ವೆಬ್ಸೈಟ್ https://bidaruniversity.kar.gov.in
ಭೇಟಿ ಮಾಡಬಹುದಾಗಿದೆ.

THG ಬೀದರ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button