Bidar

ಜ.7 ರಂದು ಸಮಾಜ ಕಲ್ಯಾಣ ಸಚಿವರ ಬೀದರ ಜಿಲ್ಲಾ ಪ್ರವಾಸ

ಬೀದರ್ : ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜನೇವರಿ 7 ರಂದು ಬೀದರ ಜಿಲ್ಲೆಯ ಪ್ರವಾಸವನ್ನು ಹಮ್ಮಿಕೊಂಡಿದ್ದು ಅಂದು ಬೆಳಿಗ್ಗೆ 10.30ಕ್ಕೆ ಕಲಬುರಗಿಯಿಂದ ರಸ್ತೆ ಮಾರ್ಗವಾಗಿ ಬಸವಕಲ್ಯಾಣಕ್ಕೆ ಪ್ರಯಾಣ ಬೆಳೆಸುವರು.

ಮಧ್ಯಾಹ್ನ 12 ಗಂಟೆಗೆ ಬಸವ ಮಹಾಮನೆ ಟ್ರಸ್ಟ್ ವತಿಯಿಂದ ಬಸವಕಲ್ಯಾಣದಲ್ಲಿ ಏರ್ಪಡಿಸಿರುವ ಸಮತಾ ಸಮಾವೇಶದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2 ಗಂಟೆಗೆ ಬಸವಕಲ್ಯಾಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಬಸವಕಲ್ಯಾಣ ತಾಲೂಕಿನ ಪರತಾಪೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಬಸವಕಲ್ಯಾಣದಿಂದ ಕಲಬುರಗಿ ಜಿಲ್ಲೆಗೆ ರಸ್ತೆಯ ಮೂಲಕ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button