ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೀದರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ಅಡಿಯಲ್ಲಿ 2023-24ನೇ ಸಾಲಿನ ಅಂತರಾಷ್ಟ್ರಿಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಇಲಾಖೆಯ ವತಿಯಿಂದ ಕಿತ್ತೂರರಾಣಿ ಚೆನ್ನಮ್ಮ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಅದರನ್ವಯ ಬೀದರ ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ಅವರಿಗೆ ಕಿತ್ತೂರರಾಣಿ ಚೆನ್ನಮ್ಮರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.

ಕಿತ್ತೂರರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಜನವರಿ 6 ರಿಂದ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ,ಬೀದರ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಳ್ಳಬಹುದು, ಎಲ್ಲಾ ದಾಖಾಲಾತಿಗಳನ್ನು ದೃಢೀಕರಿಸಿ ದ್ವಿ-ಪ್ರತಿಯಲ್ಲಿ ಜನವರಿ 20 ರಂದು ದಿನಾಂಕ:20-01-2024ರಂದು ಸಾಯಂಕಾಲ 5.30 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

THG ಬೀದರ್

Latest Indian news

Popular Stories