Bidar

ಸಂಪನ್ಮೂಲ ವ್ಯಕ್ತಿಯ ಹುದ್ದೆಗೆ ಅರ್ಜಿ ಆಹ್ವಾನ

ಬೀದರ ಜುಲೈ 28 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿಯಲ್ಲಿ ಬೀದರ ಜಿಲ್ಲೆಯಲ್ಲಿ ಸಂಪನ್ಮೂಲ ವ್ಯಕ್ತಿಯ ಹುದ್ದೆಗೆ ಗೌರವಧನ ಆಧಾರದ ಮೇಲೆ ತಾತ್ಕಲಿಕವಾಗಿ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗೆ ಅಭ್ಯರ್ಥಿಯು ಕನಿಷ್ಟ ಯಾವುದಾದರು ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು. ಅರ್ಜಿದಾರರು ದಿನಾಂಕ 28-07-2021 ರಿಂದ ಅರ್ಜಿಗಳನ್ನು ಪಡೆದು ದಿನಾಂಕ 03-08-2021ರ ಒಳಗೆ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರು ಕಛೇರಿಯಲ್ಲಿ ಬೆಳಿಗ್ಗೆ 10:00 ಗಂಟೆಯಿAದ ಸಾಯಂಕಾಲ 5:30ರ ಸಮಯದಲ್ಲಿ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅಭ್ಯರ್ಥಿಯು ಕನಿಷ್ಠ ಯಾವುದಾದರು ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು. ಎಂ.ಎಸ್.ಡಬ್ಲೂö್ಯ, ಎಂ.ಎ (ಮಹಿಳಾ ಅಧ್ಯಯನ) ಅಭ್ಯರ್ಥಿಗೆ ಆಧ್ಯತೆ ನೀಡಲಾಗುವುದು. ಅಭ್ಯರ್ಥಿಯು ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಟ 3 ರಿಂದ 5 ವರ್ಷಗಳ ಅನುಭವ (ಕಡ್ಡಾಯವಾಗಿ ಅನುಭವ ಪ್ರಮಾಣ ಪತ್ರ ಸಲ್ಲಿಸುವುದು) ಹೊಂದಿರಬೇಕು. ಅಭ್ಯರ್ಥಿಯು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಾಮರ್ಥ್ಯ ಹೊಂದಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button