ಬೀದರ್ : ನಾಳೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬೀದರ್‌ಗೆ ಆಗಮಿಸುತ್ತಿದ್ದು.ನಗರದಾದ್ಯಂತ ಕಾಂಗ್ರೆಸ್ ನಾಯಕರಿಂದ ಖರ್ಗೆಗೆ ಸ್ವಾಗತ ಕೋರುವ ಪ್ಲೆಕ್ಸ್, ಬ್ಯಾನರ್‌ಗಳು ಹಾಗೂ ಕಟೌಟ್ ರಾರಾಜಿಸುತ್ತಿವೆ.
ಬೀದರ್ ನಗರದ ನೆಹರೂ ಕ್ರಿಡಾಂಗಣದಲ್ಲಿ 371(J) ದಶಮಾನೋತ್ಸವ ಹಿನ್ನೆಲೆ ಖರ್ಗೆಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು,ದೆಹಲಿಯಿಂದ ವಿಶೇಷ ವಿಮಾನದ ಮೂಲಕ
ನಾಳೆ ಬೆಳ್ಳಿಗೆ 11 : 30 ನಿಮಿಷಕ್ಕೆ ಬೀದರ್ ಏರ್‌ಪೋರ್ಟ್‌ಗೆ ಆಗಮಿಸಲಿದ್ದು,12 ಗಂಟೆಗೆ ನೆಹರೂ ಮೈದಾನಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಂತರ ಕಾರ್ಯಕ್ರಮದ ಬಳಿಕ 16 : 40 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ತೆರಳಲಿದ್ದಾರೆ ಎಂದು ಖರ್ಗೆ ಅವರ ಖಾಸಗಿ ಅಪ್ತ ಕಾರ್ಯದರ್ಶಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.
ಬೀದರ್ ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳಿಂದ ಅಭಿನಂದನಾ ಕಾರ್ಯಕ್ರಮ ಜರುಗಲಿದ್ದುಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗುವ ಸಾಧ್ಯತೆಯಿದ್ದು,ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಶರಣಪ್ರಕಾಶ ಪಾಟೀಲ್, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಕಾಂಗ್ರಸ್ ಜಿಲ್ಲಾಧ್ಯಕ್ಷ ಹಾಗು ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ