ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಅವರು ಫೆಬ್ರವರಿ 6ರಂದು ಔರಾದ(ಬಿ) ತಾಲ್ಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು.
ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ರೂಪಿಸಿರುವ ಲ್ಯಾಪ್‌ಟಾಪ್ ವಿತರಣೆ ಯೋಜನೆಯಡಿ ಆಯ್ಕೆಯಾಗಿರುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ 40 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಭು ಚವ್ಹಾಣ್, ಬಡ ಕಾರ್ಮಿಕರ ಮಕ್ಕಳಿಗೂ ಕೂಡ ಶಿಕ್ಷಣಕ್ಕೆ ಅವಶ್ಯಕತೆಯಿರುವ ಕಂಪ್ಯೂಟರ್ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಣೆ ಯೋಜನೆಯನ್ನು ಆರಂಭಿಸಲಾಗಿದೆ. ಎಲ್ಲರಿಗೂ ಕಂಪ್ಯೂಟರ್ ಆಧಾರಿತ ಶಿಕ್ಷಣ ಸಿಗಬೇಕೆಂಬ ಸದುದ್ದೇಶದೊಂದಿಗೆ ರೂಪಿಸಿರುವ ಈ ಯೋಜನೆಯ ಸದ್ಬಳಕೆಯಾಗಬೇಕು ಎಂದು ತಿಳಿಸಿದರು.
ರಾಜ್ಯದ ಗಡಿ ಭಾಗದಲ್ಲಿರುವ ಔರಾದ್ ತಾಲ್ಲೂಕು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕೆಂಬ ಉದೇಶದಿಂದ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಾಗಾಗಿ ಹಿಂದೆAದಿಗಿAತಲೂ ಸುಧಾರಣೆ ಕಾಣಿಸಿದೆ. ವಿಶೇಷವಾಗಿ ಬಡ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡಲು ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸರ್ಕಾರದ ಮೇಲೆ ನಿರಂತರ ಒತ್ತಡ ತಂದು ಶಿಕ್ಷಣದ ಅಭಿವೃದ್ಧಿಗೆ ಬೇಕಾಗುವ ಯೋಜನೆಗಳನ್ನು ತರಲಾಗುತ್ತಿದೆ. ಶಿಕ್ಷಣದ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲಸ ಮಾಡಲು ನಾನು ಸದಾ ಸಿದ್ಧನಿದ್ದು, ಮಕ್ಕಳು ಮಾತ್ರ ತಮ್ಮ ವಿಧ್ಯಾಭ್ಯಾಸವನ್ನು ಸರಿಯಾಗಿ ಮಾಡಬೇಕು. ತಾಲ್ಲೂಕಿಗೆ ಹೆಸರು ತರಲು ಪ್ರಯತ್ನಿಸಬೇಕೆಂದು ಹೇಳಿದರು.
ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ವಿದ್ಯಾರ್ಥಿಗಳಿಗೆ ಇರುವ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಬೇಕು. ಅರ್ಹರಿಗೆ ಸೌಲಭ್ಯ ತಲುಪಿಸಬೇಕು. ಹೆಚ್ಚು ಅಂಕಗಳಿAದ ಉತ್ತೀರ್ಣರಾದ ಕೆಲವರಿಗೆ ಯೋಜನೆಯ ಸೌಲಭ್ಯ ಸಿಕ್ಕಿಲ್ಲವೆಂಬ ದೂರುಗಳು ಬರುತ್ತಿವೆ. ಇಂಥವುಗಳನ್ನು ಸರಿಪಡಿಸಿಕೊಂಡು ಯಾವುದೇ ರೀತಿಯ ದೂರುಗಳು ಬಾರದ ಹಾಗೆ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷರಾದ ದೊಂಡಿಬಾ ನರೋಟೆ, ತಹಸೀಲ್ದಾರರಾದ ನಾಗಯ್ಯ ಹಿರೇಮಠ, ಕಾರ್ಮಿಕ ನಿರೀಕ್ಷಕರಾದ ರಾಹುಲ್.ಬಿ ರತ್ನಾಕರ್, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಕೇರಬಾ ಪವಾರ, ಸಂಜು ವಡೆಯರ್, ಬನ್ಸಿ ನಾಯಕ್, ಬಾಬು ಪವಾರ್, ಇಲಾಖೆಯ ಶಿವಶಂಕರ, ರಘುನಾಥ, ಸೂರ್ಯಕಾಂತ, ಲಕ್ಷ್ಮಣ ಪೂಜಾರಿ ಹಾಗೂ ಇತರರಿದ್ದರು.
THG BIDAR