ಬೀದರಗೆ ಇಂದು ಪ್ರಧಾನಿ ಮೋದಿ ಭೇಟಿ : ಡ್ರೋನ್ ಹಾರಾಟ ನಿಷೇಧಿಸಿ ಡಿಸಿ ಆದೇಶ

ಬೀದರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೀದರ್ ಗೆ ಭೇಟಿ ನೀಡುತ್ತಿದ್ದು ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಿ ಡಿಸಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು,

ಪ್ರಧಾನಿ ನರೇಂದ್ರ ಮೋದಿ ಛತ್ತಿಸ್ಗಢನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಬೀದರ್ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಈ ಹಿನ್ನಲೆ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ನಂತರ ಬೀದರ್ ನಿಂದ ನಿಜಾಮಾಬಾದಿಗೆ ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ. ಸೇನಾ ಹೆಲಿಕ್ಯಾಪ್ಟರ್ ನಲ್ಲಿ ನಿಜಾಮಾಬಾದ್ ಗೆ ಪ್ರಧಾನಿ ಮೋದಿ ತೆರಳಲಿದ್ದಾರೆ. ಸಂಜೆ ನಿಜಾಮಾಬಾದ್ ನಿಂದ ಬೀದರ್ ಗೆ ಆಗಮಿಸಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Latest Indian news

Popular Stories