Bidar

ಬರ ಘೋಷಿಸುವ ವರೆಗೆ ಸುಮ್ಮನಿರುವುದಿಲ್ಲ: ಪ್ರಭು ಚವ್ಹಾಣ

ಔರಾದ(ಬಿ) ಮತ್ತು ಕಮಲನಗರ ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದ್ದು, ಸಮರ್ಪಕ ಬೆಳೆಯಾಗದೇ ರೈತರು ತೀವ್ರ ಸಂಕಷ್ಟ ಎದುರಿಸುತ್ತಾರೆ.
ಮೊದಲ ಹಂತದಲ್ಲಿಯೇ ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಬೇಕಿತ್ತು. ಸರ್ಕಾರ ಮಾಡದೇ ಇರುವುದರಿಂದ ಮುಖ್ಯಮಂತ್ರಿಗಳು, ಸಚಿವರು ಹಾಗೂ ಸಂಬAಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ವಾಸ್ತವ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಬರ ನಿರ್ವಹಣೆ ಮಾನದಂಡಗಳ ಅನ್ವಯ ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇರುವ ಬಗ್ಗೆ ಸರ್ಕಾರಕ್ಕೆ ತಿಳಿಸಿರುತ್ತದೆ.
ನಾನು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಗಳನ್ನು ಮತ್ತು ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸುತ್ತೇನೆ. ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆಯಿಲ್ಲ. ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವ ವರೆಗೆ ಸುಮ್ಮನಿರುವುದಿಲ್ಲ ಎಂದು ಹೇಳಿದರು.

ವರದಿ : ಹಣಮಂತ ದೇಶಮುಖ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button