ಬ್ರಿಮ್ಸ್ ಮೂಲ ಸೌಕರ್ಯಕ್ಕೆ 10 ಕೋಟಿ ರೂ. ಹೆಚ್ಚುವರಿ ಅನುದಾನ: ಸಚಿವ ಪ್ರಭು ಚವ್ಹಾಣ್

ಬೀದರ ಜೂನ್ 21 (ಕ.ವಾ.): ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿಗಳ ನಿರ್ಮಾಣಕ್ಕೆ ಪರಿಷ್ಕöÈತ ರೂ.10.77 ಕೋಟಿ ಅನುದಾನ ನೀಡಲು ಜೂನ್ 21ರಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಪಶುಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಈ ಭಾಗದ ಜನರ ಆರೋಗ್ಯ ರಕ್ಷಣೆಗೆ ಬ್ರಿಮ್ಸ್ ಬೆನ್ನೆಲುಬಾಗಿತ್ತು. ಇದರ ಉನ್ನತೀಕರಣ ಮತ್ತು ಅಭಿವೃದ್ದಿ ಈ ಭಾಗದ ಜನರ ಆರೋಗ್ಯ ಸೇವೆಯನ್ನು ಹೆಚ್ಚು ಬಲಪಡಿಸಿದಂತಾಗುತ್ತದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಭಾರತ ಸರ್ಕಾರವು ಕೇಂದ್ರ ಪುರಸ್ಕöÈತ ಯೋಜನೆ ಅಡಿಯಲ್ಲಿ ರೂ.36 ಕೋಟಿ ಈಗಾಗಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿ ನಿರ್ಮಾಣ ಕಾಮಗಾರಿಯನ್ನು ರೂ.7.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಮತ್ತು ರೂ.15.22 ಕೋಟಿ ಉಪಕರಣಗಳನ್ನು ಖರೀದಿಸಲು ಒಟ್ಟು ರೂ. 17.50ಕೋಟಿಗೆ ಆಡಳಿತಾತ್ಮಕ ಅನುಮೊದನೆ ನೀಡಿ ಈ ಪೈಕಿ ಕೇಂದ್ರ ಹಾಗೂ ರಾಜ್ಯದ ಪಾಲು ಸೇರಿದಂತೆ ರೂ.15.22 ಕೋಟಿ ಈಗಾಗಲೇ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಈಗಾಗಲೇ ಸೀಟುಗಳ ಮಿತಿಯನ್ನು 100 ರಿಂದ 150 ಕ್ಕೆ ಹೆಚ್ಚಿಸಲಾಗಿದೆ. ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೇರಿರುವುದರಿಂದ ಉಪನ್ಯಾಸಕರ ಕೊಠಡಿ, ಆಡಿಟೋರಿಯಂ, ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರ ಹಾಗೂ ಹಾಸ್ಟೇಲ್‌ಗಳ ಉನ್ನತೀಕರಣ ಎಂ.ಸಿ.ಐ ಮಾನದಂಡಗಳ ಪ್ರಕಾರ ಸಂಸ್ಥೆಗಳ ಅವಶ್ಯಕತೆಗಳನ್ನು ಪೂರೈಸುವಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ನೀಡುವಲ್ಲಿ ಸಹಕಾರಿಯಾಗಿದೆ.
ಈ ಸಂಬAಧ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವರಾದ ಡಾ. ಹರ್ಷ ವರ್ಧನ್, ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ ಹಾಗೂ ಈ ಭಾಗದ ಸಂಸದರಿಗೆ ಧನ್ಯವಾದ ತಿಳಿಸುತ್ತೇನೆ.
ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಬದ್ಧವಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಪಶುಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.

Latest Indian news

Popular Stories