ಮೇ 24ರಿಂದ ಜೂನ್ 7ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

ಬೀದರ ಮೇ 23 (ಕರ್ನಾಟಕ ವಾರ್ತೆ): ಬೀದರ್ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಮುಂಜಾಗೃತ ಕ್ರಮವಾಗಿ ಮಾನ್ಯ ಸರಕಾರವು ಹೊರಡಿಸಿರುವ ಆದೇಶ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮೇ 24ರ ಬೆಳಗ್ಗೆ 6 ಗಂಟೆಯಿAದ ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ ಕಾಯ್ದೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಆದೇಶ ಹೊರಡಿಸಿದ್ದಾರೆ.
ಮಾನ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಧ್ಯಕ್ಷರು ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಬೆಂಗಳೂರು ಇವರು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗುತ್ತಿದ್ದು, ಸದರಿ ಸೋಂಕಿನ ಸರಪಳಿ ತಡೆಗಟ್ಟುವ ಸಂಬAಧ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಪಾಲನೆ ಮಾಡುವಗೋಸ್ಕರ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ರಾಜ್ಯದಲ್ಲಿ ದಿ: 24.05.2021 ರ ಬೆಳಗ್ಗೆ 6.00 ಗಂಟೆಯಿAದ ದಿ: 07.06.2021 ರ ಬೆಳಗ್ಗೆ 6.00 ಗಂಟೆಯವರೆಗೆ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸುವಂತೆ ಪರಿಷ್ಕçತ ಮಾರ್ಗಸೂಚಿಗಳೊಂದಿಗೆ ಆದೇಶಿಸಿರುತ್ತಾರೆ.
ಪ್ರಯುಕ್ತ, ಬೀದರ್ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡದಂತೆ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಕೋನದಿಂದ ಜಿಲ್ಲೆಯಾದ್ಯಂತ ದಿನಾಂಕ : 24.05.2021 ರ ಬೆಳಗ್ಗೆ 6.00 ಗಂಟೆಯಿAದ ದಿನಾಂಕ: 07.06.2021 ರ ಬೆಳಗ್ಗೆ 6.00 ಗಂಟೆಯವರೆಗೆ ಮಾನ್ಯ ಸರಕಾರವು ಹೊರಡಿಸಿರುವ ಆದೇಶ ಕಟ್ಟುನಿಟ್ಟಾಗಿ ಜಾರಿಗೊಳಿಸುವದು ಅವಶ್ಯಕವಾಗಿರುವುದರಿಂದ ದಂಡ ಪ್ರಕ್ರಿಯಾ ಸಂಹಿತೆ ಕಾಯ್ದೆ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬೀದರ ಜಿಲ್ಲೆಯಾದ್ಯಂತ ದಿನಾಂಕ 24.05.2021 ರ ಬೆಳಗ್ಗೆ 6.00 ಗಂಟೆಯಿAದ ದಿನಾಂಕ: 07.06.2021 ರ ಬೆಳಗ್ಗೆ 6.00 ಗಂಟೆಯವರೆಗೆ 07.05.2021 ರಂದು ಸರಕಾರದ ಆದೇಶದಲ್ಲಿ ಹೊರಡಿಸಿರುವ ಪರಿಷ್ಕçತ ಮಾರ್ಗಸೂಚಿಗಳಲ್ಲಿನ ಎಲ್ಲಾ ಷರತ್ತುಗಳಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಮುಂಜಾಗೃತ ಕ್ರಮವಾಗಿ ಮಾನ್ಯ ಸರಕಾರವು ಹೊರಡಿಸಿರುವ ಆದೇಶ ಕಟ್ಟುನಿಟ್ಟಾಗಿ ಜಾರಿಗೊಳಿಸಲು ದಿನಾಂಕ: 24.05.2021 ರ ಬೆಳಗ್ಗೆ 6.00 ಗಂಟೆಯಿಂದ ದಿನಾಂಕ: 07.06.2021 ರ ಬೆಳಗ್ಗೆ 6.00 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ ಕಾಯ್ದೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸುವ ಕುರಿತು.

Latest Indian news

Popular Stories