ಉದ್ಯೋಗಿನಿ ಯೋಜನೆಯಡಿ; ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೀದರ ಅಗಸ್ಟ್ 13 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಸಾಲ ಯೋಜನೆಯಡಿ ವಿವಿಧ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಲು ಬ್ಯಾಂಕಿನಿಂದ ಸಾಲ ಹಾಗೂ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗಿನಿ ಸಾಲ ಯೋಜನೆಯಡಿ ಕನಿಷ್ಠ 100000 ರೂ. ದಿಂದ ಗರಿಷ್ಟ 300000 ರೂ. ಸಾಲ ಸೌಲಭ್ಯ ಇರುತ್ತದೆ. ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇ.30ರಷ್ಟು ಗರಿಷ್ಟ 90000 ರೂ.ಗಳ ಹಾಗೂ ವಿಷೇಶ ವರ್ಗದವರಿಗೆ (ವಿಧವೆಯರು ಸಂಕಷ್ಟಕ್ಕೊಳಗಾದ ಮಹಿಳೆಯರು ಹಾಗೂ ಅಂಗವಿಕಲ ಮಹಿಳೆಯರು) ಶೇ.30 ರಷ್ಟು ಗರಿಷ್ಟ 90000 ರೂ.ಗಳ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ ಘಟಕದ ವೆಚ್ಚ ಶೇ.50% ರಷ್ಟು ಗರಿಷ್ಟ 150000 ರೂ. ಸಹಾಯಧನದ ಸೌಲಭ್ಯವಿರುತ್ತದೆ.
ಅರ್ಜಿಗಳನ್ನು ಸಂಬಂಧಪಟ್ಟ ಆಯಾ ತಾಲ್ಲೂಕಿನ ಶಿಶು ಅಭಿವ್ರದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಉಚಿತವಾಗಿ ವಿತರಸಲಾಗುವುದು. ಅರ್ಜಿಗಳನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಆಗಸ್ಟ್.31 ರೊಳಗಾಗಿ ಸಂಬಂಧಪಟ್ಟ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸುವುದು. ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
18 ವರ್ಷದಿಂದ 55 ವರ್ಷದ ಮಹಿಳೆಯರು ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಕುಟುಂಬದ ವಾರ್ಷಿಕ ಆದಾಯವು 200000 ರೂ. ಮೀರಿರಬಾರದು.
ವಿಧವೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರ ಕಛೇರಿ ಅಥವಾ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು.

Latest Indian news

Popular Stories