
ಯುವನಿಧಿ ಯೋಜನೆಯ ಸೌಲಭ್ಯಕ್ಕಾಗಿ ನೋಂದಣಿ ಪ್ರಾರಂಭ
ಬೀದರ್ : ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರಕಾರದ 5ನೇ ಗ್ಯಾರಂಟಿ ಯೋಜನೆಯಾದ “ಯುವನಿಧಿ” ಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು 2022-23ರಲ್ಲಿ ಸಾಲಿನಲ್ಲಿ ಉತ್ತಿರ್ಣರಾದ ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳು ಸದರಿ ಯೋಜನೆಯ ಲಾಭ ಪಡೆದುಕೊಳ್ಳಲು ಅರ್ಜಿ ಸಲ್ಲಿಬಹುದು.
ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಉಚಿತÀವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪುಜಿ ಸೇವಾ ಕೇಂದ್ರಗಳಲ್ಲಿ ಅಧಿಕೃತ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
2022-23ರಲ್ಲಿ ಪದವಿ, ಡಿಪ್ಲೋಮಾ ಉತ್ತಿರ್ಣರಾಗಿ ಕನಿಷ್ಟ 06 ತಿಂಗಳ ಅವಧಿಯ ವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ, ಕರ್ನಾಟಕದಲ್ಲಿ ವಾಸವಿರುವವರು ಯುವನಿಧಿ ಯೋಜನೆಯಡಿ ನೊಂದಾಯಿಸಲು ಅರ್ಹರಾಗಿರುತ್ತಾರೆ. ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ ಪಾಸ ಪುಸ್ತಕ, ಇತ್ಯಾದಿ ದಾಖಲೆಯೊಂದಿಗೆ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ / ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ಬೀದರಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




