ಚಾಮರಾಜನಗರ: ಕಾರಿನ ಮೇಲೆ ಲಾರಿ ಪಲ್ಟಿ, ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

ಚಾಮರಾಜನಗರ, ಮಾರ್ಚ್‌, 12: ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟದಲ್ಲಿ ನಡೆದಿದೆ.ಚಾಮರಾಜನಗರ ಗಡಿಭಾಗದಲ್ಲಿರುವ ತಮಿಳುನಾಡಿನ ದಿಂಬಂ ಘಾಟ್ 27ನೇ ತಿರುವಿನಲ್ಲಿ ಕಾರಿನ ಮೇಲೆ ಕಬ್ಬು ತುಂಬಿದ ಲಾರಿ ಪಲ್ಟಿಯಾಗಿ, ಸ್ಥಳದಲ್ಲೇ ಮೂವರು ಸಾವು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಮೃತರ ಕುರಿತು ಗುರುತು ಪತ್ತೆಯಾಗಿಲ್ಲ. ಸದ್ಯ ಆಸನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

Latest Indian news

Popular Stories