ಹನೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಅಂಗಡಿಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್- ಇಬ್ಬರಿಗೆ ಗಾಯ

ಚಾಮರಾಜನಗರ, ಜನವರಿ, 12: ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆ ಬಸ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಎಲ್ಲೆಮಾಳ ಸಮೀಪ‌ ನಡೆದಿದೆ. ಘಟನೆಯಲ್ಲಿ ಕೌದಳ್ಳಿ ಗ್ರಾಮದ ಬಂಕಪ್ಪ(31) ಹಾಗೂ ಸೀಗಯ್ಯ(48) ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಲ್ಲೇಮಾಳ ಗ್ರಾಮದ ಸಮೀಪ ನಿಯಂತ್ರಣ ತಪ್ಪಿ ಮತ್ತುರಾಜ್ ಎಂಬವರಿಗೆ ಸೇರಿದ ಅಂಗಡಿಗೆ ನುಗ್ಗಿದೆ. ಈ ವೇಳೆ ಅಂಗಡಿ ಮುಂಭಾಗ ಬೈಕ್‌ ಮೇಲೆ ಕುಳಿತಿದ್ದ ಬಂಕಪ್ಪ ಎಂಬಾತನ ಕಾಲು ಮುರಿದಿದ್ದು, ಸೀಗಯ್ಯನಿಗೂ ತೀವ್ರ ಪೆಟ್ಟು ಬಿದ್ದಿದೆ.

ಇನ್ನು ಹನೂರು ಪೊಲೀಸರು ಸದ್ಯ ಬಸ್ ಅನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದು, ಪ್ರಯಾಣಿಕರನ್ನು ಬೇರೆ ಬಸ್‌ನಲ್ಲಿ ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಾಲಾ ಬಸ್ ಪಲ್ಟಿ ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ಚಾಲಕನ ನಿಯಂತ್ರಣ ತಪ್ಪಿ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ಪಲ್ಟಿಯಾಗಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡೊದ್ದರು. ಇನ್ನು ಗಾಯಾಳು ವಿದ್ಯಾರ್ಥಿಗಳನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿತ್ತು.ಸದ್ಯ ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿತ್ತು.

Latest Indian news

Popular Stories